ಏ.18ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

0 26,771

ಏ.18ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಏಪ್ರಿಲ್‌ 13ರಿಂದ 18ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಭಾರಿ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಈ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಂಭವಿದೆ.

ಇದಲ್ಲದೇ ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಉಳಿದ, ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ಏಪ್ರಿಲ್‌ 14ರಿಂದ ಮೂರು ದಿನಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣಾಂಶ ತುಸು ಏರಿಕೆ ಕಾಣಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ಹಾಗೂ 30ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಒಳನಾಡು ಪ್ರದೇಶದಲ್ಲಿ ಗಾಳಿ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಮಳೆ?

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ, ಬೀದರ್‌ ಜಿಲ್ಲೆಯ ಮಂಠಾಳ, ಕಲಬುರಗಿ ಜಿಲ್ಲೆ ನಿಂಬರ್ಗಾ ತಾಂಡಾದಲ್ಲಿ 3 ಸೆಂ.ಮೀ, ವಿಜಯಪುರ ಜಿಲ್ಲೆಯ ಇಂಡಿ, ಕಲಬುರಗಿ ಆಳಂದ, ಬಾಗಲಕೋಟೆಯ ಇಳಕಲ್, ಯಾದಗಿರಿಯ ನಾರಾಯಣಪುರ, ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಹಾಗೂ ಬೀದರ್ ಜಿಲ್ಲೆಯ ಭಾಲ್ಕಿ, ಕಲಬುರಗಿಯ ಯಡ್ರಾಮಿ, ಬೆಳಗಾವಿಯ ಯಡ್ವಾಡ, ವಿಜಯಪುರದ ಮುದ್ದೇಬಿಹಾಳ, ಚಿಕ್ಕಮಗಳೂರಿನ ಕಳಸದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

Leave A Reply

Your email address will not be published.

error: Content is protected !!