ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ !

0 156

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ. ಇಂದು ಮತ್ತು ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ತಿಳಿಸಿದೆ. ಅಲ್ಲದೇ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಸದ್ಯ ಬೆಂಗಳೂರಲ್ಲಿ 36.7° ರಷ್ಟು ತಾಪಮಾನ ಮುಂದುವರೆದಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದರ ನಡುವೆಯೂ ಬೆಂಗಳೂರಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ.

ಗಂಟೆಗೆ 30 ರಿಂದ 40 ಕಿಲೋ ಮೀಟರ್ ಗಾಳಿ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಜನ ಸಹ ಮಳೆಗಾಗಿ ಕಾಯ್ತಾ ಇದ್ದಾರೆ.

ರಾಜ್ಯದಲ್ಲಿ ತಾಪಮಾನ ಇಳಿಕೆ ಕಂಡಿದೆ. ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದ್ದ ಕಲ್ಯಾಣ ಕರ್ನಾಟಕದಲ್ಲಿ ತಾಪಮಾನ ಇಳಿಕೆಯಾಗಿದೆ. ದಾಖಲೆ ಬರೆದಿದ್ದ ಕಲಬುರಗಿ, ರಾಯಚೂರಲ್ಲಿ ತಾಪಮಾನ ದಿಢೀರ್ ಇಳಿಕೆ ಕಂಡಿದೆ.

ಎರಡು ದಿನಗಳ ಹಿಂದೆ ಕಲುಬುರಗಿ ಮತ್ತು ರಾಯುಚೂರಿನಲ್ಲಿ 44° ನಷ್ಟು ತಾಪಮಾನ ದಾಖಲಾಗಿತ್ತು. ಇಂದು ಕಲಬುರಗಿ 41.4° ಹಾಗೂ ರಾಯಚೂರು 40.8° ನಷ್ಟು ತಾಪಮಾನ ದಾಖಲಾಗಿದೆ.

ಉಳಿದಂತೆ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸರಾಸರಿ 1.50° ರಿಂದ 3.0° ನಷ್ಟು ತಾಪಮಾನ ಇಳಿಕೆ. ಬೆಂಗಳೂರಲ್ಲಿ ಯಥಾಸ್ಥಿತಿ ಧಗೆ ವಾತಾವರಣ ಮುಂದುವರೆದಿದೆ.

Leave A Reply

Your email address will not be published.

error: Content is protected !!