146 ದಿನಗಳ ಬಳಿಕ ಬೆಂಗಳೂರಿನಲ್ಲಿ ಸುರಿಯಲಿದೆ ಮಳೆ

0 164

ಬೆಂಗಳೂರು : ಹವಾಮಾನ ಇಲಾಖೆ ಪ್ರಕಾರ ಕಳೆದ ವರ್ಷ ನ. 21 ರಂದು ಬೆಂಗಳೂರಿನಲ್ಲಿ ಕೊನೆಯ ಬಾರಿಗೆ ಮಳೆಯಾಗಿತ್ತು.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಬುಧವಾರ, ಗುರುವಾರ ಮತ್ತು ಶುಕ್ರವಾರದಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗಿನಲ್ಲೂ ಈ ವಾರ ಮಳೆ ಸಾಧ್ಯತೆ ಇದೆ.

Leave A Reply

Your email address will not be published.

error: Content is protected !!