Rain | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ

0 984

ಬೆಂಗಳೂರು : ಹವಾಮಾನ ಇಲಾಖೆಯು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ (Rain) ಎಂದು ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಕೊಪ್ಪಳದಲ್ಲಿ 38.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹಳಷ್ಟು ಕಡಿಮೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ.

Leave A Reply

Your email address will not be published.

error: Content is protected !!