ಬೆಂಗಳೂರು : ಇಂದಿನಿಂದ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾವಣಗೆರೆ, ತುಮಕೂರು, ಬಾಗಲಕೋಟೆ, ಬೀದರ್, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯಾಗಲಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಈ ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ
ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.