Rain Alerts | ಇಂದಿನಿಂದ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

0 947

ಬೆಂಗಳೂರು : ಇಂದಿನಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರಗಿ, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದ ಕಡೆ ಏಪ್ರಿಲ್ 13 ರಿಂದ ಮಳೆ ಶುರುವಾಗಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಏಪ್ರಿಲ್ 13 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.

ಮುಂದಿನ 4 ದಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ.

Leave A Reply

Your email address will not be published.

error: Content is protected !!