Rain Updates | ಏ.18 ರಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

0 727

ಬೆಂಗಳೂರು : ಬಿಸಿಲಿನಿಂದ ಕಂಗೆಟ್ಟು ಹೋಗಿರುವ ಜನರಿಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಿದೆ. ಆದರೆ ಇನ್ನೂ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 18 ರಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಚಾಮರಾಜನಗರ, ಹಾಸನ, ಚಿಕ್ಕಮಗಳೂರಲ್ಲಿ ಮಳೆಯಾಗಲಿದ್ದು, ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಬೀದರ್, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಸಾಧರಣದಿಂದ ಜೋರು ಮಳೆಯಾಗಲಿದೆ ಎಂಬ ಸೂಚನೆ ಸಿಕ್ಕಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ, ರಾಯಚೂರು, ಬಳ್ಳಾರಿ, ಕೋಲಾರ, ಮಂಡ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಏ.16 ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಪ್ರದೇಶಕ್ಕೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆಯಾಗಲಿದೆ. ಬಿಸಿಲಿನ ತಾಪಮಾನದಿಂದ ಕಂಗೆಟ್ಟ ಜನ ಮಳೆಯಾಗಲಿ ಎಂದು ಕಾದು ಕುಳಿತಿದ್ದು ಕೆಲ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

Leave A Reply

Your email address will not be published.

error: Content is protected !!