THIRTHAHALLI ; ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ತುಂಗಾ ನದಿಯಲ್ಲಿ ಇಂದು ಪತ್ತೆಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಗ್ರಾಮದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಮೃತ ಬ್ಯಾಂಕ್ ಮ್ಯಾನೇಜರ್. ಕಾಲು ಜಾರಿ ನದಿಗೆ ಬಿದ್ದರೋ ಅಥವಾ ತಾವೇ ನದಿಗೆ ಹಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದೆ.
ಮೃತ ಶ್ರೀವತ್ಸ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು ಎಂದು ತಿಳಿದುಬಂದಿದ್ದು, ಸದ್ಯ ಅವರು ತೀರ್ಥಹಳ್ಳಿಯಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ.

ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್, ಬಟ್ಟೆ ಬಿಟ್ಟು ಕಣ್ಮರೆಯಾಗಿದ್ದರು. ಮೊಬೈಲ್ ಆಧಾರದ ಮೇಲೆ ಬ್ಯಾಂಕ್ ಮ್ಯಾನೇಜರ್ ಎಂದು ಹೇಳಲಾಗಿತ್ತು. ನಿನ್ನೆ ತುಂಗಾ ನದಿಯಲ್ಲಿ ಅಗ್ನಿಶಾಮಕ ದಳ, ಪೊಲೀಸರು ಸಿಬ್ಬಂದಿ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಆದರೆ ಇಂದು ಬೆಳಗ್ಗೆ ಅವರ ಶವ ಪತ್ತೆಯಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.