ರಿಪ್ಪನ್‌ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಸಂತಾಪ ;
ಕಾಂಗ್ರೆಸ್ ಪಕ್ಷದ ಮುಖಂಡ, ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ಸಿಡಿಸಿ ಉಪಾಧ್ಯಕ್ಷ, ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾಗಿ ಕೋಣಂದೂರು ಬೃಹನ್ಮಠ ಮತ್ತು ಆನಂದಪುರ ಮುರುಘಾರಾಜೇಂದ್ರ ಮಠ ವಿವಿಧ ಮಠ ಮಂದಿರಗಳಿಗೆ ಕೊಡುಗೈ ದಾನಿಯಾಗಿದ್ದ ಬೆಳಕೋಡು ಹಾಲಸ್ವಾಮಿಗೌಡರ ನಿಧನದಿಂದ ವೀರಶೈವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಆನಂದಪುರ ಮುರುಘಾಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಮಳಲಿಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಬಿ.ಸ್ವಾಮಿರಾವ್, ಡಾ.ಜಿ.ಡಿ.ನಾರಾಯಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೌಡ, ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಶ್ರೀಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಡಾ.ಕೆ.ಬಿ.ಕಮಲಾಕ್ಷಪ್ಪ ಸೇರಿದಂತೆ ಅಪಾರ ಅಭಿಮಾನಿಗಳು ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿ ಕುಟುಂಬವರ್ಗಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಆಶಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.