ಶಿವಮೊಗ್ಗ ಸುದ್ದಿ

ರೈತ ಬಾಂಧವರೇ ಗಮನಿಸಿ : ಹವಾಮಾನಾಧರಿತ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

Bele Vime : ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಮರು ವಿನ್ಯಾಸಗೊಳಿಸಿರುವ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾರಿಗೆ ತಂದಿದ್ದು, ಇದರಡಿ ರೈತರು ಅಡಿಕೆ, ಕಾಳುಮೆಣಸು, ಮಾವು ಹಾಗೂ ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅರ್ಜಿಗೆ ಅಗತ್ಯ ದಾಖಲೆಗಳು:

  • ಪ್ರಸಕ್ತ ಸಾಲಿನ ಪಹಣಿ (RTC)
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಆಧಾರ್ ಕಾರ್ಡ್
  • ಸ್ವಯಂ ಘೋಷಿತ ಬೆಳೆ ವಿವರಗಳು

ಅರ್ಜಿ ಸಲ್ಲಿಸಬಹುದಾದ ಸ್ಥಳಗಳು: ರೈತರು ಸಮೀಪದ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗೆ ಕೊನೆಯ ದಿನಾಂಕ: ಜುಲೈ 31, 2025

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ತೋಟಗಾರಿಕೆ ಇಲಾಖೆ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸಂಖ್ಯೆ:

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
  • ಶಿವಮೊಗ್ಗ: 08182-279415 / 9900046087
  • ಭದ್ರಾವತಿ: 08282-295029 / 9108252536
  • ಶಿಕಾರಿಪುರ: 08187-223544 / 8310662972
  • ಸೊರಬ: 08184-295112 / 9900461117
  • ಸಾಗರ: 08183-295124 / 9449177200
  • ತೀರ್ಥಹಳ್ಳಿ: 08181-228151 / 9108280642
  • ಹೊಸನಗರ: 08185-295364 / 9591695327

ರೈತರು ಇದರ ಸದುಪಯೋಗವನ್ನು ಉಪಯೋಗಿಸಿಕೊಂಡು ತಮ್ಮ ಬೆಳೆಗಳಿಗೆ ಹವಾಮಾನ ಸಂಬಂಧಿತ ಅನಾಹುತಗಳ ವಿರುದ್ಧ ಭದ್ರತೆ ಪಡೆಯಬಹುದಾಗಿದೆ.

Read More :ರೈಲು ಪ್ರಯಾಣ ದರ ಏರಿಕೆ ಶಾಕ್! ಜುಲೈ 1ರಿಂದ ಟಿಕೆಟ್ ದುಬಾರಿ – ಇಲ್ಲಿದೆ ಹೊಸ ದರದ ವಿವರ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650