Sagara

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ

<p>ಸಾಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಜೊತೆಗೆ ಪಕ್ಷ ಹಾಗೂ ಸರ್ಕಾರದ ವಿವಿಧ ಸಮಿತಿಗಳಲ್ಲಿರುವ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ಸಂಪುಟದ ಪಟ್ಟಿ ನಿರಾಸೆ ಮೂಡಿಸಿದೆ. ಇದರ ವಿರುದ್ಧ ಸಾಗರದ ಜಂಬಗಾರು ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … <a title="ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ" class="read-more" href="https://malnadtimes.com/belur-gopalakrishna-supporters-resignation/" aria-label="Read more about ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ">Read more</a></p>

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ – InShot 20260803 204402373

ಸಾಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಜೊತೆಗೆ ಪಕ್ಷ ಹಾಗೂ ಸರ್ಕಾರದ ವಿವಿಧ ಸಮಿತಿಗಳಲ್ಲಿರುವ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ಸಂಪುಟದ ಪಟ್ಟಿ ನಿರಾಸೆ ಮೂಡಿಸಿದೆ. ಇದರ ವಿರುದ್ಧ ಸಾಗರದ ಜಂಬಗಾರು ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಟೈರ್‌ಗೆ ಬೆಂಕಿ ಹಚ್ಚಿ ಪಕ್ಷದ ವರಿಷ್ಠರ ವಿರುದ್ಧ ಘೋಷಣೆ ಕೂಗಿದ್ದರು.

ಬೇಳೂರು ಅವರು ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಗಾಗಿ ನಿರಂತರವಾಗಿ ಶ್ರಮಿಸಿದ್ದರೂ ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಕ್ಷದ ಹೈಕಮಾಂಡ್ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಗ್ಯಾರಂಟಿ ಯೋಜನಾ ಸಮಿತಿ ಸದಸ್ಯ ರಾಜೀನಾಮೆ

ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ, ಅವರ ಕಟ್ಟಾ ಅಭಿಮಾನಿ ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೆನೆ ಎಂದು ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ.

ರವೀಂದ್ರ ಕೆರೆಹಳ್ಳಿ

ಪಕ್ಷದ ನಿರ್ಧಾರದಿಂದ ಕ್ಷೇತ್ರದ ಕಾರ್ಯಕರ್ತರು ಮತ್ತು ಬೇಳೂರು ಬೆಂಬಲಿಗರಿಗೆ ತೀವ್ರ ನೋವಾಗಿದೆ. ತಮ್ಮ ಅಸಮಾಧಾನವನ್ನು ಪಕ್ಷದ ವರಿಷ್ಠರಿಗೆ ತಲುಪಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನಾ ಸಮಿತಿಯ ಹುದ್ದೆ ತ್ಯಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ

ನಾಗೋಡಿ ವಿಶ್ವನಾಥ್

ಇದರ ಮಧ್ಯೆ, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಾಗೋಡಿ ವಿಶ್ವನಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಆಗಸ್ಟ್ 3ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿರುವ ಪತ್ರದಲ್ಲಿ, ಸಚಿವ ಸಂಪುಟ ವಿಸ್ತರಣೆಯಲ್ಲಿ ಗೋಪಾಲಕೃಷ್ಣ ಬೇಳೂರು ಅವರಿಗೆ ಸ್ಥಾನ ನೀಡದಿರುವುದರಿಂದ ಕ್ಷೇತ್ರದ ಜನರು, ರೈತರು ಮತ್ತು ಕಾರ್ಯಕರ್ತರಿಗೆ ನಿರಾಸೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಬೇಳೂರು ಅವರಿಗೆ ಸಚಿವ ಸ್ಥಾನ ದೊರೆತಿದ್ದರೆ ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಅವಕಾಶ ಸಿಗುತ್ತಿತ್ತು. ಪಕ್ಷದ ನಿರ್ಧಾರದಿಂದ ಮನನೊಂದು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ನಿಟ್ಟೂರು ಭಾಗದ ಹಲವು ಮುಖಂಡರಿಂದ ಹುದ್ದೆ ತ್ಯಾಗ

ನಿಟ್ಟೂರು ಕಾಂಗ್ರೆಸ್ ಘಟಕದ ಅಧ್ಯಕ್ಷರು ಹಾಗೂ ಕೆಡಿಪಿ ಸದಸ್ಯರಾದ ನಾಗೇಂದ್ರ ಜೋಗಿ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಲಾಗಿದೆ.

ನಾಗೇಂದ್ರ ಜೋಗಿ

ಇವರ ಜೊತೆಗೆ ಕೆಳಗಿನ ಮುಖಂಡರೂ ಪಕ್ಷದ ಹುದ್ದೆಗಳು ಮತ್ತು ನಾಮನಿರ್ದೇಶಿತ ಸದಸ್ಯತ್ವಗಳಿಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ:

  • ನಿಟ್ಟೂರು ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಉಪಾಧ್ಯಕ್ಷ ಹಾಗೂ ನಿಟ್ಟೂರು ಬೂತ್ ಸಮಿತಿ ಅಧ್ಯಕ್ಷ ಜಿ.ವಿ. ಸುಬ್ರಮಣ್ಯ
  • ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಚಂದಯ್ಯ ಜೈನ್
  • ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ನರಸಿಂಹ ಪೂಜಾರಿ

ಇವರು ತಮ್ಮ ಪಕ್ಷದ ಹುದ್ದೆಗಳು ಹಾಗೂ ನಾಮನಿರ್ದೇಶಿತ ಸದಸ್ಯತ್ವಗಳನ್ನು ತ್ಯಜಿಸಿರುವುದಾಗಿ ಬೆಂಬಲಿಗರು ತಿಳಿಸಿದ್ದಾರೆ.

ಸಾಗರ ಕಾಂಗ್ರೆಸ್‌ಗೆ ಹೊಸ ಸವಾಲು

ಪ್ರತಿಭಟನೆ, ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರ ರಾಜೀನಾಮೆ ಮತ್ತು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರ ರಾಜೀನಾಮೆಯಿಂದ ಸಾಗರ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತಷ್ಟು ಬಹಿರಂಗವಾಗಿದೆ.

ಗೋಪಾಲಕೃಷ್ಣ ಬೇಳೂರು ಅವರ ಮುಂದಿನ ನಿರ್ಧಾರ ಹಾಗೂ ಬೆಂಬಲಿಗರ ಸಾಮೂಹಿಕ ರಾಜೀನಾಮೆಗೆ ಪಕ್ಷದ ವರಿಷ್ಠರು ನೀಡುವ ಪ್ರತಿಕ್ರಿಯೆ ಈಗ ಕುತೂಹಲ ಮೂಡಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650