ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವ ನಾಳೆ (ಸೆ.16 ಮಂಗಳವಾರ) ನಡೆಯಲಿದ್ದು ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷ ಮತ್ತು ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದಾರೆ ಎಂದು ಅಮ್ಮನಘಟ್ಟ ಜಾತ್ರಾ ಸಮಿತಿಯ ಕಾರ್ಯಾಧ್ಯಕ್ಷ ಕಲಗೋಡು ರತ್ನಾಕರ ತಿಳಿಸಿದ್ದಾರೆ.
ಮಂಗಳವಾರ ವರ್ಷದ ಮೂರನೇ ಜಾತ್ರೆ ನಡೆಯಲಿದ್ದು ಅಮ್ಮನಘಟ್ಟ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣ ಆಗಮಿಸಿ ದೇವಿಯ ದರ್ಶನ ಪಡೆದು ನಂತರ ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.