ಹೊಸನಗರ

ಮಂತ್ರಿ ಸ್ಥಾನ ಸಿಗದಿದ್ದರೂ ಪರವಾಗಿಲ್ಲ: ಹೊಸ ಜವಾಬ್ದಾರಿ ಬಗ್ಗೆ ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು?

ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದರೂ, ವಿಧಾನಸೌಧದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿಯನ್ನು ಪಕ್ಷ ವಹಿಸಿರುವುದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

Beluru Gopalakrishna in Hosanagara

ಹೊಸನಗರ: ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದರೂ, ವಿಧಾನಸೌಧದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿಯನ್ನು ಪಕ್ಷ ವಹಿಸಿರುವುದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹೊಸನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪಕ್ಷವು ನನ್ನನ್ನು ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ (Chief Whip) ನೇಮಕ ಮಾಡಿದೆ. ಸಚಿವ ಸ್ಥಾನ ಸಿಗದಿದ್ದರೂ ಬೇಸರವಿಲ್ಲ, ವಿಧಾನಸೌಧದಲ್ಲಿ ಕಾರ್ಯನಿರ್ವಹಿಸಲು ಮತ್ತೊಂದು ಉತ್ತಮ ಅವಕಾಶ ದೊರೆತಿದೆ. ಈ ಮಹತ್ವದ ಜವಾಬ್ದಾರಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರಿಗೆ ನಾನು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿ ನೇಮಕಗೊಂಡಿರುವ ಮಂಜುನಾಥ್ ಭಂಡಾರಿ ಅವರಿಗೂ ಗೋಪಾಲಕೃಷ್ಣ ಶುಭಾಶಯ ಕೋರಿದರು. “ನಮ್ಮದೇ ಜಿಲ್ಲೆಯವರು ಹಾಗೂ ನನ್ನ ಆಪ್ತ ಮಿತ್ರರಾದ ಮಂಜುನಾಥ್ ಭಂಡಾರಿ ಅವರಿಗೆ ಈ ಹುದ್ದೆ ಸಿಕ್ಕಿರುವುದು ನನಗೆ ಬಹಳ ಸಂತೋಷ ತಂದಿದೆ. ಅವರ ಕಾರ್ಯವೈಖರಿಗೆ ಒಳ್ಳೆಯದಾಗಲಿ” ಎಂದು ಹಾರೈಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]