Hosanagara

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ನಿಶ್ಚಿತ ; ಬೇಳೂರು ವಿಶ್ವಾಸ

ಹೊಸನಗರ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Beluru Gopalakrishna) ವಿಶ್ವಾಸ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಗಾಂಧಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದು, ಚಿರಪರಿಚಿತರಾಗಿರುವುದು ಗೆಲುವಿಗೆ ಸಹಕಾರಿ ಆಗಲಿದೆ ಎಂದರು.

ಶಿಕ್ಷಕರು, ಪದವೀಧರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದೇವೆ. ಎರಡೂ ವರ್ಗಗಳ ಸಮಸ್ಯೆಗಳು ಹಾಗೂ ಅವರ ಬೇಡಿಕೆಗಳ ಕುರಿತು ಸರಕಾರಕ್ಕೆ ಅರಿವಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಗೆಹರಿಸಲು ಸರಕಾರ ಬದ್ಧವಾಗಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಹೆಚ್ಚು ಸೂಕ್ತ ಎಂದರು.

ಇತ್ತೀಚೆಗೆ ಕೇಳಿ ಬಂದಿರುವ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಸರಕಾರದ ಅಧೀನದಲ್ಲಿರುವ ಪೊಲೀಸ್ ಹಾಗೂ ಸಿಐಡಿಗಳು ಕ್ಷಮತೆ ಹೊಂದಿವೆ. ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಯಾವುದೇ ಮುಲಾಜಿಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಯ ಭಾವಕ್ಕೆ ಒಳಗಾಗಿ ಕಾಂಗ್ರೆಸ್ ವಿರುದ್ಧ ವೃಥಾರೋಪ ಮಾಡುತ್ತಿದ್ದಾರೆ ಎಂದರು.

ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ನೀರಿನ ಕೊರತೆ ಸಮಸ್ಯೆ ಕಡಿಮೆಯಾಗಿದೆ. ಅನಾಹುತಗಳು ಸಂಭವಿಸಿದಲ್ಲಿ ತ್ವರಿತಗತಿಯಲ್ಲಿ ಅಗತ್ಯ ಕ್ರಮ ವಹಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ನಾಗರಿಕರಿಗೆ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಸುಮಾ ಸುಬ್ರಮಣ್ಯ, ಶ್ರೀನಿವಾಸ ಕಾಮತ್, ಜಯಶೀಲಪ್ಪಗೌಡ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಚಿದಂಬರ, ಪ್ರವೀಣ್ ಬೃಂದಾವನ, ಜಯನಗರ ಗುರು, ಸಣ್ಣಕ್ಕಿ ಮಂಜು, ಅಶ್ವಿನಿಕುಮಾರ್, ನೇತ್ರಾ ಸುಬ್ರಾಯಭಟ್, ಮತ್ತಿತರರು ಇದ್ದರು.

Read More:BSNL ನೆಟ್‌ವರ್ಕ್ ಸಮಸ್ಯೆ, ಟವರ್ ಏರಿ ಪ್ರತಿಭಟಿಸಿದ ಗ್ರಾಮಸ್ಥರು

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>