ಶಿವಮೊಗ್ಗ

ಭದ್ರಾ ಮುಂಗಾರು ನೀರು ಹಂಚಿಕೆ: ಅಂತಿಮ ನಿರ್ಧಾರಕ್ಕಾಗಿ ಸಿಎಂ ಜೊತೆ ಸಮಾಲೋಚನೆ ಎಂದ ಸಚಿವ ಮಧು ಬಂಗಾರಪ್ಪ

ಭದ್ರಾ ಮುಂಗಾರು ನೀರು ಹಂಚಿಕೆ: ಅಂತಿಮ ನಿರ್ಧಾರಕ್ಕಾಗಿ ಸಿಎಂ ಜೊತೆ ಸಮಾಲೋಚನೆ ಎಂದ ಸಚಿವ ಮಧು ಬಂಗಾರಪ್ಪ – bhadra

ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೀರು ಹರಿಸುವ ವಿಚಾರವಾಗಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಯಿತು.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭದ್ರಾ ಜಲಾಶಯದ ಪ್ರಸ್ತುತ ನೀರಿನ ಸಂಗ್ರಹ, ಮಲೆನಾಡು ಹಾಗೂ ಜಲಾನಯನ ಪ್ರದೇಶಗಳ ಮಳೆ ಪರಿಸ್ಥಿತಿ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಪ್ರಮಾಣದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಜಲಾಶಯದ ನೀರಿನ ಮಟ್ಟ, ಮುಂಗಾರು ಬೆಳೆಗಳ ಅವಶ್ಯಕತೆ ಹಾಗೂ ಅಚ್ಚುಕಟ್ಟು ಪ್ರದೇಶದ ರೈತರ ಸ್ಥಿತಿಗತಿ ಬಗ್ಗೆ ವಿವರವಾದ ಮಾಹಿತಿ ನೀಡಿದರು. ರೈತರಿಗೆ ನೀರು ಒದಗಿಸುವ ವಿಷಯದಲ್ಲಿ ಜಾಗ್ರತೆಯಿಂದ ನಿರ್ಧಾರ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸಭೆಯ ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರೈತರ ಹಿತಾಸಕ್ತಿ ಕಾಯುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು. ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಶೀಘ್ರದಲ್ಲೇ ಸಮಾಲೋಚನೆ ನಡೆಸಲಾಗುವುದು ಎಂದರು.

ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ, ಜಲಾಶಯದ ನೀರಿನ ಲಭ್ಯತೆ ಹಾಗೂ ಮುಂದಿನ ದಿನಗಳ ಮಳೆಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಲಮಿತಿಯೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಸಭೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕರಾದ ಕೆ.ಎಸ್. ಬಸವಂತಪ್ಪ, ಬಿ.ಕೆ. ಸಂಗಮೇಶ್, ಡಿ.ಜಿ. ಶಾಂತನಗೌಡ, ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ರೈತ ಮುಖಂಡರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!