HOSANAGARA ; ಭೂಮಿ ಹುಣ್ಣಿಮೆ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ರೈತಾಪಿ ವರ್ಗವು ಮಲೆನಾಡ ಸಂಪ್ರದಾಯದಂತೆ ಶ್ರದ್ಧಾ ಭಕ್ತಿ ಪೂರ್ವಕವಾಗಿ ವಿಜೃಂಭಣೆಯಿಂದ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸಿತು.

ತಾಲೂಕಿನ ಸೊನಲೆ ಗ್ರಾಮದಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಗೇರುಪುರ ಗ್ರಾಮದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್, ಕರಿನಗೊಳ್ಳಿ ಗ್ರಾಮದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎನ್. ಸುಧಾಕರ್, ಕೋಡೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಹೊಸನಗರ ಬ್ಲಾಕ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಪ್ರಧಾನ ಕಾರ್ಯದರ್ಶಿ ಡಿ.ಎಂ.ಸದಾಶಿವ ಶ್ರೇಷ್ಠಿ, ಸೊನಲೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ಎರಗಿ ಉಮೇಶ್, ಆಲವಳ್ಳಿಯಲ್ಲಿ ವೀರೇಶ್ ಸೇರಿದಂತೆ ಹಲವರು ತಮ್ಮ ಕೃಷಿ ಭೂಮಿಗೆ ವಿಶೇಷ ಪೂಜೆ ನೆರವೇರಿಸಿ ಭೂ ತಾಯಿಯ ಕೃಪೆಗೆ ಪಾತ್ರರಾದರು.







ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.