ಹೊಸನಗರ ; ಮಲೆನಾಡಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದಲ್ಲಿ ಕಳೆದ ಬಾರಿಗಿಂತ 36 ಅಡಿ ಹೆಚ್ಚಿದ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 55337 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಗುರುವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಬಿದನೂರುನಗರದಲ್ಲಿ ಅತ್ಯಧಿಕ 225 ಮಿ.ಮೀ. ಮಳೆ ದಾಖಲಾಗಿದೆ.
ಉಳಿದಂತೆ ಚಕ್ರಾನಗರದಲ್ಲಿ 195 ಮಿ.ಮೀ., ಯಡೂರು 146 ಮಿ.ಮೀ., ಮಾಸ್ತಿಕಟ್ಟೆ 140, ಮಾಣಿ 136, ಸುಳಗೋಡು 129, ಹುಲಿಕಲ್ 103, ಸಾವೇಹಕ್ಲು 91 ಮತ್ತು ಹೊಸನಗರದಲ್ಲಿ 31.6 ಮಿ.ಮೀ. ಮಳೆ ದಾಖಲಾಗಿದೆ.
ಲಿಂಗನಮಕ್ಕಿ ಜಲಾಶಯ :
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗುರುವಾರ ಬೆಳಿಗ್ಗೆ 8 ಗಂಟೆಗೆ 1781.55 ಅಡಿ ನೀರಿನ ಸಂಗ್ರಹವಾಗಿದ್ದು ಜಲಾಶಯಕ್ಕೆ 55337 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ 1745.60 ಅಡಿ ದಾಖಲಾಗಿತ್ತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.