News

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ನ್ಯೂಸ್ ! ರದ್ದಾಗಲಿವೆ ಈ ಕಾರ್ಡ್ ಗಳು !

BPL Ration card:ಪ್ರಮುಖ ದಾಖಲೆಗಳಲ್ಲಿ ಒಂದಾಗಿರುವ ರೇಷನ್ ಕಾರ್ಡ್ ಬಡವರಿಗೆ ಮುಖ್ಯವಾಗಿ ನೀಡಲಾಗುತ್ತದೆ. ಆದರೇ ಅರ್ಹತೆ ಇಲ್ಲದ ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳಿಗೂ ಬಿಪಿಎಲ್ ಪಡಿತರ ಚೀಟಿಗಳು ಇವೆ. ಅರ್ಹತೆ ಇಲ್ಲದವರನ್ನು ತೆಗೆದು ಹಾಕಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

WhatsApp Group Join Now
Telegram Group Join Now
Instagram Group Join Now

ಆರ್ಥಿಕವಾಗಿ ಸುಧಾರಿಸಿದವರಿಗೆ ಎಪಿಎಲ್ ಕಾರ್ಡ್ ಅನ್ನು ನೀಡಿತ್ತು. ಆದರೂ ಕೆಲವರು ಬಿಪಿಎಲ್ ಕಾರ್ಡ್ ಹೊಂದಿರುವವರು ಅದರ ಅರ್ಹತೆಯನ್ನು ಹೊಂದಿಲ್ಲದವರು ಹಾಗಾಗಿ ಇದೀಗ ಅನರ್ಹ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಅನರ್ಹರ ಬಳಿಯಿರುವ ಪಡಿತರ ಕಾರ್ಡ್ಗಳನ್ನು ರದ್ದುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಸಿ.ಎಂ. ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳು ಇದ್ದು, 5,30,88,636 ಸದಸ್ಯ ಫಲಾನುಭವಿಗಳು ಇದ್ದಾರೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯವನ್ನು ಪಡೆಯುತ್ತಿದ್ದಾರೆಂಬ ಮಾಹಿತಿ ಇದೆ. ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಪಡೆದಂತಹವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿತ್ತು. ಅರ್ಹರಿಗೆ ಅನುಕೂಲ ಮಾಡಿಕೊಡಲು ಈ ಕ್ರಮವನ್ನು ತೆಗೆದುಕೊಂಡಿತ್ತು.

ತುಂಬಾ ಜನರು ಅನರ್ಹರು ಬಿಪಿಎಲ್ ಕಾರ್ಡ್ಗಳನ್ನು ಪಡೆದಿರುವುದು ತಿಳಿದು ಬಂತು. ಆಗ ಸರ್ಕಾರ ಅವರೆಲ್ಲರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್ಗಳಾಗಿ ಬದಲಾಯಿಸುವ ಕೆಲಸ ಮಾಡಿತ್ತು. ಆದರೂ ಈಗಲೂ ಕೆಲ ಅನರ್ಹರು ಅಂದರೆ ಆರ್ಥಿಕವಾಗಿ ಅನುಕೂಲವಾಗಿದ್ದರೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ. ಸರ್ಕಾರ ಎಚ್ಚರಿಕೆಯನ್ನು ನೀಡುತ್ತಿದ್ದು ಇನ್ನು ಮುಂದೆ ಅನರ್ಹರ ಬಿಪಿಎಲ್ ಕಾರ್ಡ್ನ್ನು ಸರ್ಕಾರ ರದ್ದುಮಾಡಲಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Read More

ಆಸ್ತಿ ಮತ್ತು ಭೂಮಿ ನೊಂದಣಿಯಲ್ಲಿ ಹೊಸ ನಿಯಮ ಜಾರಿಗೆ!

ಈ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ ಏರಿಕೆ: ಮಹತ್ವದ ನಿರ್ಣಯ ಮಾಡಿದ ಕೇಂದ್ರ ಸಂಪುಟ!

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650