ಬೈಕ್ ಅಪಘಾತ ; ಸೆಲೂನ್ ಶಾಪ್ ನಡೆಸುತ್ತಿದ್ದ ಯುವಕ ಸ್ಥಳದಲ್ಲೇ ಸಾವು !

Written by Mahesha Hindlemane

Published on:

ಸಾಗರ ; ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಕೊಪ್ಪ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆನಂದಪುರದಲ್ಲಿ ಸೆಲೂನ್ ಶಾಪ್ ನಡೆಸುತ್ತಿದ್ದ ಗೌತಮಪುರ ನಿವಾಸಿ ಕೃಷ್ಣ (30) ಮೃತ ದುರ್ದೈವಿ. ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಅಪರಿಚಿತ ವಾಹನ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಶನಿವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಟವನ್ನು ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೊಪ್ಪ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.

Leave a Comment