ಹೊಸನಗರ

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಯುವಕರಿಂದ ಬೈಕ್ ರ‍್ಯಾಲಿ

ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ 59ನೇ ವರ್ಷದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಗೂ ಮುನ್ನ, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಆಶ್ರಯದಲ್ಲಿ ಹಿಂದೂ ಮಹಾಸಭಾ ಯುವಕರಿಂದ ಬೃಹತ್ ಜಾಗೃತಿ ಬೈಕ್ ರ‍್ಯಾಲಿ ನಡೆಯಿತು.

ಹಿಂದೂ ಮಹಾಸಭಾ ಯುವಕರಿಂದ ಬೈಕ್ ರ‍್ಯಾಲಿ Rpt

ರಿಪ್ಪನ್‌ಪೇಟೆ ; ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ 59ನೇ ವರ್ಷದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಗೂ ಮುನ್ನ, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಆಶ್ರಯದಲ್ಲಿ ಹಿಂದೂ ಮಹಾಸಭಾ ಯುವಕರಿಂದ ಬೃಹತ್ ಜಾಗೃತಿ ಬೈಕ್ ರ‍್ಯಾಲಿ ನಡೆಯಿತು.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ರಸ್ತೆಯ ವಿನಾಯಕ ದೇವಸ್ಥಾನದಿಂದ ಚಾಲನೆ ಪಡೆದ ಈ ರ‍್ಯಾಲಿಯಲ್ಲಿ ನೂರಾರು ದ್ವಿಚಕ್ರ ವಾಹನಗಳು ಪಾಲ್ಗೊಂಡಿದ್ದವು. ರ‍್ಯಾಲಿಯು ವಿನಾಯಕ ವೃತ್ತ, ತೀರ್ಥಹಳ್ಳಿ ರಸ್ತೆ, ಬರುವೆ ಚೌಡೇಶ್ವರಿ ಬೀದಿ, ಹೊಸನಗರ ರಸ್ತೆ ಹಾಗೂ ಸಾಗರ ಮಾರ್ಗದ ವಿದ್ಯಾನಗರ ರಸ್ತೆಯ ಮೂಲಕ ಸಾಗಿ ಅಂತಿಮವಾಗಿ ಮತ್ತೆ ದೇವಸ್ಥಾನದ ಆವರಣಕ್ಕೆ ಬಂದು ತಲುಪಿತು.

ಬಿಗಿ ಪೊಲೀಸ್ ಭದ್ರತೆ:

ಕಾರ್ಯಕ್ರಮದ ಯಶಸ್ಸು ಹಾಗೂ ಶಾಂತಿ ಸುವ್ಯವಸ್ಥೆಗಾಗಿ ತೀರ್ಥಹಳ್ಳಿ ಡಿವೈಎಸ್ಪಿ ಅವರ ಸುಪರ್ದಿಯಲ್ಲಿ ಇಬ್ಬರು ಇನ್‌ಸ್ಪೆಕ್ಟರ್, 6 ಪಿಎಸ್‌ಐ, ಎಎಸ್‌ಐ, ಪೊಲೀಸ್ ಸಿಬ್ಬಂದಿ, ಗೃಹರಕ್ಷಕ ದಳ, ಕೆಎಸ್‌ಆರ್‌ಪಿ ಮತ್ತು ಡಿಎಆರ್ ತುಕಡಿಗಳು ಸೇರಿದಂತೆ ಒಟ್ಟು 250ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ‌.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್, ಉಪತಹಶೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇವಾ ಸಮಿತಿಯ ಅಧ್ಯಕ್ಷ ಸುಧೀಂದ್ರ ಪೂಜಾರಿ, ಕಾರ್ಯದರ್ಶಿ ಆರ್.ಎಂ. ನವೀನ್ ಸೇರಿದಂತೆ ಹಲವು ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!