RIPPONPETE ; ಇಲ್ಲಿನ ಹೊಸನಗರ ರಸ್ತೆಯ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.
ಗವಟೂರು ಸಮೀಪದ ಬಿಳಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ದೈವಿ. ಟಿವಿಎಸ್ ಎಕ್ಸ್ಎಲ್ ಬೈಕಿನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಬರುತ್ತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಸಂಜೀವ್ ಪೂಜಾರಿಗೆ ಗಂಭೀರ ಗಾಯಗಳಾಗಿತ್ತು.
ಈ ಸಂದರ್ಭದಲ್ಲಿ ಬೆಳಗಿನ ರೌಂಡ್ಸ್ ನಲ್ಲಿದ್ದ ಪಟ್ಟಣದ ಪಿಎಸ್‌ಐ ಅದೇ ಮಾರ್ಗವಾಗಿ ಬರುತ್ತಿದ್ದಾಗ ಗಾಯಾಳುವನ್ನು ಗಮನಿಸಿ ತನ್ನ ಖಾಸಗಿ ವಾಹನದಲ್ಲಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಆಂಬುಲೆನ್ಸ್ ಗೆ ಶಿಫ್ಟ್ ಮಾಡುವಾಗ ಮೃತಪಟ್ಟಿದ್ದಾರೆ.
ಮೃತ ಸಂಜೀವ್ ಪೂಜಾರಿ ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಿಟ್ ಅಂಡ್ ರನ್ ಮಾಡಿರುವ ವಾಹನದ ಪತ್ತೆಗೆ ಮುಂದಾಗಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.