ಬೈಕ್ ಕಳ್ಳನ ಬಂಧನ, 9 ಬೈಕ್‍ಗಳು ವಶಕ್ಕೆ !

Written by Mahesha Hindlemane

Published on:

AJJAMPURA ; ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು, ಬಂಧಿತನಿಂದ 2.55 ಲಕ್ಷ ರೂ. ಮೌಲ್ಯದ 9 ಬೈಕ್‍ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚನ್ನಾಪುರ ಗ್ರಾಮದ ಕೆ.ಅರುಣ್ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯಾಗಿದ್ದಾನೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಬೈಕ್ ಕಳ್ಳತನ ಪ್ರಕರಣ ನಡೆಯುತ್ತಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ಕಡೂರು ಪೊಲೀಸ್ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿ ನೇತೃತ್ವದ ತಂಡವನ್ನು ತನಿಖೆಗೆ ನೇಮಿಸಿದ್ದರು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ತಂಡ ಕೂಲಿ ಕೆಲಸದ ಜತೆಗೆ ಬೆಡ್ ಶೀಟ್ ವ್ಯಾಪಾರ ಮಾಡುತ್ತಿದ್ದ ಅಜ್ಜಂಪುರ ತಾಲೂಕಿನ ಚನ್ನಾಪುರ ಗ್ರಾಮದ ಅರುಣ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕಡೂರು ಪಟ್ಟಣ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Leave a Comment