ಹೊಸನಗರ

ನಿಮ್ಮ ಅಡಿಕೆ ತೋಟಕ್ಕೆ ಎಲೆ ಚುಕ್ಕೆ ರೋಗ ಕಾಡುತ್ತಿದೆಯೇ? ಹಾಗಾದರೆ ತೋಟಗಾರಿಕೆ ಇಲಾಖೆಯ ಈ ಸುದ್ದಿ ತಪ್ಪದೇ ಓದಿ!

2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (NHM) ಯೋಜನೆಯಡಿಯಲ್ಲಿ ಅಡಿಕೆ ಬೆಳೆಯಲ್ಲಿ ಕಂಡುಬರುವ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ತೋಟಗಾರಿಕೆ ಇಲಾಖೆಯ ವತಿಯಿಂದ ಅರ್ಹ ರೈತರಿಂದ ಅರ್ಜಿ ಸಲ್ಲಿಸಲಾಗಿದೆ.

Horticulture Office Hosanagara

ಹೊಸನಗರ: 2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (NHM) ಯೋಜನೆಯಡಿಯಲ್ಲಿ ಅಡಿಕೆ ಬೆಳೆಯಲ್ಲಿ ಕಂಡುಬರುವ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ತೋಟಗಾರಿಕೆ ಇಲಾಖೆಯ ವತಿಯಿಂದ ಅರ್ಹ ರೈತರಿಗೆ ಉಚಿತ/ಸಹಾಯಧನದಡಿಯಲ್ಲಿ AMC ಜೈವಿಕ ಗೊಬ್ಬರವನ್ನು ವಿತರಿಸಲಾಗುತ್ತಿದೆ ಎಂದು ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪುಟ್ಟಾನಾಯ್ಕ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಯಾರೆಲ್ಲ ಅರ್ಜಿ ಸಲ್ಲಿಸಬಹುದು:

ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡದ (ST) ಅಡಿಕೆ ತೋಟ ಹೊಂದಿರುವ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಗೊಬ್ಬರ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:

  • ಜಮೀನಿನ ಪಹಣಿ (RTC)
  • ಆಧಾರ್ ಕಾರ್ಡ್ ಪ್ರತಿ (Xerox)
  • ಬ್ಯಾಂಕ್ ಪಾಸ್ ಬುಕ್ ಪ್ರತಿ (Xerox)
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಪ್ರತಿ (Xerox)

ಆಸಕ್ತ ರೈತರು ಮೇಲ್ಕಂಡ ದಾಖಲೆಗಳನ್ನು ಹೊಸನಗರದ ತೋಟಗಾರಿಕೆ ಇಲಾಖೆ ಕಚೇರಿಗೆ ಸಲ್ಲಿಸಿ ಜೈವಿಕ ಗೊಬ್ಬರವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.

ಹನಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ:

ಇದೇ ವೇಳೆ, 2026-27ನೇ ಸಾಲಿನ ಹನಿ ನೀರಾವರಿ (Drip Irrigation) ಯೋಜನೆಯ ಅನುಷ್ಠಾನಕ್ಕಾಗಿಯೂ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಕೆಗಾಗಿ ಹೊಸನಗರದ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

  • ಕೆರೆಹಳ್ಳಿ, ಕಸಬಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ (ಸ.ತೋ.ಅ.): 9481501571
  • ಸಹಾಯಕ ತೋಟಗಾರಿಕೆ ನಿರ್ದೇಶಕರು (ಸ.ತೋ.ನಿ.), ಹೊಸನಗರ: 9972529813
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]