N.R.PURA | ಕಾಡುಕೋಣವೊಂದು ದಿಢೀರ್ ದಾಳಿ ನಡೆಸಿದ ಪರಿಣಾಮ ಎಸ್ಟೇಟ್‌ನ ಮೇಸ್ತ್ರೀ ಹಾಗೂ ಅಸ್ಸಾಂ ಮೂಲದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಳೆಹೊನ್ನೂರು ಸಮೀಪದ ಎಸ್.ಬಿದರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಲಿಲ್ಲಿಖಾನ್ ಎಸ್ಟೇಟ್‌ನ ಮೇಸ್ತ್ರೀ ರಾಜು ಹಾಗೂ ಅಸ್ಸಾಂ ಮೂಲದ ಕಾರ್ಮಿಕ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರ್ ಹಿಂದಿನಿಂದ ನುಗ್ಗಿದ ಕಾಡುಕೋಣ ಇಬ್ಬರ ಮೇಲೂ ದಾಳಿ ಮಾಡಿದೆ ಎನ್ನಲಾಗಿದೆ.

ದಾಳಿಯಿಂದಾಗಿ ಮೇಸ್ತ್ರೀ ಹಾಗೂ ಅಸ್ಸಾಂ ಮೂಲದ ಕಾರ್ಮಿಕನಿಗೆ ಗಂಭೀರ ಗಾಯವಾಗಿದ್ದು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
ಕೂಡಲೇ ಗಾಯಾಳುಗಳನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.