RIPPONPETE ; ರಾಜ್ಯದಲ್ಲಿನ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿತ್ಯ ಒಂದಲ್ಲ ಒಂದು ಗೊಂದಲ್ಲದಲ್ಲಿ ಸಿಲುಕಿಕೊಂಡಿರುವ ಬಗ್ಗೆ ಮತ್ತು ಐದು ಗ್ಯಾರಂಟಿ ಯೋಜನೆಯಿಂದಾಗಿ ಜನ ಸಾಕಷ್ಟು ಬೇಸತ್ತು ಹೋಗಿದ್ದು ಇದೇ ತಿಂಗಳಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಸರ್ಕಾರವನ್ನು ತಿರಸ್ಕಾರಿಸಿ ಬಿಜೆಪಿ ಜೆಡಿಎಸ್ ಗೆಲ್ಲಿಸುವ ಸ್ಪಷ್ಟ ನಿರ್ಧಾರವನ್ನು ವ್ಯಕ್ತಪಡಿಸುತ್ತಿದ್ದು ಈ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ನಿಶ್ಚಿತವಾಗಿದೆ ಎಂದು ಹೊಸನಗರ ತಾಲ್ಲೂಕೀ ಬಿಜೆಪಿ ಮಾಜಿ ಅಧ್ಯಕ್ಷ ಎ.ವಿ.ಮಲ್ಲಿಕಾರ್ಜುನ ವಿಶ್ವಾಸ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್ ಆಹಮದ್‌ರವರು ವಕ್ಫ್ ಬೋರ್ಡ್ ಹೆಸರಿನಲ್ಲಿ ರಾಜ್ಯದ ಹಲವು ಕಡೆಯಲ್ಲಿ ರೈತರ ಪಹಣಿಯಲ್ಲಿ 9 ಮತ್ತು 11ನೇ ಕಾಲಂ ನಲ್ಲಿ ವಕ್ಫ್ ಹೆಸರಿನಲ್ಲಿ ನೋಂದಣಿಯಾಗಿ ಬರುತ್ತಿರುವುದರ ಬಗ್ಗೆ ಸಾಕಷ್ಟು ರೈತರನ್ನು ಕಂಗಾಲು ಮಾಡಿದಂತಾಗಿದೆ. ಅಲ್ಲದೆ ಈ ಬಗ್ಗೆ ಬಿಜೆಪಿ ಸಹ ಹೋರಾಟದ ಮೂಲಕ ರೈತರನ್ನು ಜಾಗೃತಗೊಳಿಸುವ ಕಾರ್ಯದಲ್ಲಿ ತೊಡಗಿದ್ದು ಈಗ ನಡೆಯುತ್ತಿರುವ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ಮತದಾರರು ಪರೋಕ್ಷವಾಗಿ ವ್ಯಕ್ತಪಡಿಸುತ್ತಿದ್ದಾರೆಂದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.