ಶಿವಮೊಗ್ಗ ಸುದ್ದಿ

ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು ; ಹತ್ಯೆಯೋ? ಆತ್ಮಹತ್ಯೆಯೋ? ಸಾರ್ವಜನಿಕ ವಲಯದಲ್ಲಿ ಚರ್ಚೆ !

ಸೊರಬ ; ಬಿಜೆಪಿ ಮುಖಂಡನ ಅನೈತಿಕ ಸಂಬಂಧದಿಂದ ಬೇಸತ್ತು ಆತನ ಪತ್ನಿ ನೇಣಿಗೆ ಶರಣಾದ ಘಟನೆ ಭಾನುವಾರ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೂಲತಃ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಂಜುಳಾ ಅವರನ್ನು ಪಟ್ಟಣದ ಕಾನುಕೇರಿ ಬಡಾವಣೆಯ ನಿವಾಸಿ, ಪುರಸಭೆ ಮಾಜಿ ಅಧ್ಯಕ್ಷ ಪ್ರಭು ಮೇಸ್ತ್ರಿ ಅವರೊಂದಿಗೆ 2024ರಲ್ಲಿ ವಿವಾಹ ಮಾಡಿಕೊಡಲಾಗಿತ್ತು. ಆದರೆ, ಪ್ರಭುಮೇಸ್ತ್ರಿ ತನ್ನ ಮಾಲಿಕತ್ವದ ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಹೊಂದಿರುವ ಅನೈತಿಕ ಸಂಬಂಧವನ್ನು ಬಿಟ್ಟುಬಿಡುವಂತೆ ಅನೇಕ ಬಾರಿ ಹಿರಿಯರು ಹಾಗೂ ಸಂಬಂಧಿಗಳು ಬುದ್ದಿ ಮಾತು ಹೇಳಿದ್ದರೂ, ಆಕೆಯೊಂದಿಗೆ ಸಂಬಂಧ ಮುಂದುವರೆಸಿಕೊಂಡು ಮಂಜುಳಾ ಅವರಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗುತ್ತಿದೆ. ಇದರಿಂದ ಬೇಸತ್ತ ಪ್ರಭು ಮೇಸ್ತ್ರಿ ಪತ್ನಿ ಮಂಜುಳಾ ಮನೆಯ ಹಿಂಭಾಗದ ಮರದ ತೊಲೆಗೆ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಮೃತಳ ತಾಯಿ ಶೋಭಾ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಭುಮೇಸ್ತ್ರಿ ಹಿನ್ನೆಲೆ:

ಇಟ್ಟಿಗೆ ಗುಮ್ಮಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪ್ರಭು ಮೇಸ್ತ್ರಿ ಕಾಲಕ್ರಮೇಣ ಕಟ್ಟಡ ನಿರ್ಮಾಣ ಗುತ್ತಿಗೆ ಕೆಲಸಕ್ಕೆ ಪ್ರಾರಂಭಿಸಿ ಯಶಸ್ಸನ್ನು ಗಳಿಸಿದ್ದರು. ಇವರ ಜನಪ್ರಿಯತೆ ಮತ್ತು ಕಳೆದ ಬಾರಿಯ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಹನ್ನೆರಡನೇ ವಾರ್ಡ್‌ನಿಂದ ಮೊದಲ ಬಾರಿಗೆ ಬಿಜೆಪಿ ಕಣಕ್ಕೆ ಇಳಿಸಿತ್ತು. ಅದೃಷ್ಟವೆಂಬಂತೆ ಮೊದಲ ಬಾರಿಗೆ ಚುನಾಯಿತರಾಗಿ ನಂತರದ ದಿನದಲ್ಲಿ ಮೇಲ್ದರ್ಜೆಗೆ ಏರಿದ ಸೊರಬ ಪುರಸಭೆಯ ಅಧ್ಯಕ್ಷಗಾದಿಯನ್ನು ಅಲಂಕರಿಸಿದ್ದರು. ಬಿಜೆಪಿಯಲ್ಲಿ ಬಣರಾಜಕಾರಣದ ಕಿತ್ತಾಟ ನಡೆಯುತ್ತಿದೆ ಎನ್ನುವ ಹೊತ್ತಿನಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಇವೆಲ್ಲದರ ನಡುವೆ ಹಾರ್ಡ್‌ವೇರ್ ನಡೆಸುತ್ತಿದ್ದ ಸಂದರ್ಭದಲ್ಲಿ ಅಲ್ಲಿಯೇ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗುತ್ತಿದೆ. ಈ ಮೊದಲು ಕೇರಳ ಮೂಲದ ಮಹಿಳೆಯೊಂದಿಗೆ ಮೊದಲು ಮದುವೆಯಾಗಿದ್ದರು. ಮೊದಲ ಪತ್ನಿಯನ್ನು ತೊರೆದಿದ್ದ ಪ್ರಭುಮೇಸ್ತ್ರಿ ಜೊತೆಗೆ ಮಂಜುಳಾ ಅವರ ವಿವಾಹವು ಜರುಗಿತ್ತು. ಮೊದಲ ಪತ್ನಿ ತವರಿಗೆ ತೆರಳಿದರೆ, ಎರಡನೇ ಪತ್ನಿ ಬಾರದ ಲೋಕಕ್ಕೆ ತೆರಳಿದ್ದಾಳೆ. ಅಲ್ಲದೇ, ಮೃತ ಮಂಜುಳಾ ಗರ್ಭಿಣಿಯಾಗಿದ್ದಳು ಎನ್ನಲಾಗುತ್ತಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಸೋಮವಾರ ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮರಣೋತ್ತರ ಪರೀಕ್ಷೆಯ ವರದಿಯ ತರುಯವಾಯವಷ್ಟೇ ಇದೊಂದು ಆತ್ಮಹತ್ಯೆಯೋ? ಅಥವಾ ಹತ್ಯೆಯೋ? ಎಂಬುದು ತಿಳಿದುಬರದಲಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]