ಹೊಸನಗರ

ಶಿಕ್ಷಕರ ದಿನಾಚರಣೆಗೆ ಗೈರಾದ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆಕ್ರೋಶ

ರಾಷ್ಟ್ರೀಯ ಹಬ್ಬವಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ಗೈರುಹಾಜರಾಗಿರುವುದನ್ನು ಬಿಜೆಪಿ ಮುಖಂಡ ಆರ್.ಟಿ. ಗೋಪಾಲ್ ತೀವ್ರವಾಗಿ ಖಂಡಿಸಿದ್ದಾರೆ.

InShot 20260907 123427209

ರಿಪ್ಪನ್‌ಪೇಟೆ : ರಾಷ್ಟ್ರೀಯ ಹಬ್ಬವಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ಗೈರುಹಾಜರಾಗಿರುವುದನ್ನು ಬಿಜೆಪಿ ಮುಖಂಡ ಆರ್.ಟಿ. ಗೋಪಾಲ್ ತೀವ್ರವಾಗಿ ಖಂಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸ್ಥಳೀಯ ಗ್ರಾಮ ಪಂಚಾಯಿತಿಯ ಕುವೆಂಪು ಸಭಾಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಕರಿಗೆ ಅಪಮಾನ:

ದೇಶದ ಭವಿಷ್ಯವನ್ನು ಕಟ್ಟುವ ಶಿಕ್ಷಕರನ್ನು ಗೌರವಿಸುವ ಸೌಜನ್ಯ ಶಾಸಕರಿಗೆ ಇಲ್ಲದಿರುವುದು ವಿಪರ್ಯಾಸ. ಇದು ಕೇವಲ ಸಾಂಕೇತಿಕ ಆಚರಣೆಯಲ್ಲ, ಬದಲಾಗಿ ಇಡೀ ಶಿಕ್ಷಕ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸುವ ದಿನ. ಇಂತಹ ವೇದಿಕೆಗೆ ಗೈರಾಗುವ ಮೂಲಕ ಶಾಸಕರು ಶಿಕ್ಷಕ ವೃಂದಕ್ಕೆ ಅವಮಾನ ಮಾಡಿದ್ದಾರೆ.

ಮತ ಕೇಳಲು ಮಾತ್ರ ಶಿಕ್ಷಕರು ಬೇಕೆ?:

ಚುನಾವಣೆ ಸಂದರ್ಭದಲ್ಲಿ ಮತಕ್ಕಾಗಿ ಶಿಕ್ಷಕರು ನೆನಪಾಗುತ್ತಾರೆ. ಆದರೆ, ಅವರನ್ನು ಸನ್ಮಾನಿಸುವ ದಿನದಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಸಮಯವಿಲ್ಲವೇ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಕ್ಷಮೆಯಾಚನೆಗೆ ಒತ್ತಾಯ:

ಜನಪ್ರತಿನಿಧಿಯಾಗಿ ಎಲ್ಲರ ಭಾವನೆಗಳನ್ನು ಗೌರವಿಸುವುದು ಶಾಸಕರ ಕರ್ತವ್ಯ. ಈ ಕೂಡಲೇ ಅವರು ತಮ್ಮ ಗೈರುಹಾಜರಿಗೆ ಕಾರಣವನ್ನು ಸ್ಪಷ್ಟಪಡಿಸಬೇಕು ಹಾಗೂ ಶಿಕ್ಷಕರ ಕ್ಷಮೆಯಾಚಿಸಬೇಕು ಎಂದು ಆರ್.ಟಿ. ಗೋಪಾಲ್ ಆಗ್ರಹಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದೇ ವೇಳೆ ಮಾತನಾಡಿದ ಬಿಜೆಪಿ ತಾಲೂಕು ಉಪಾಧ್ಯಕ್ಷ ಮೆಣಸೆ ಆನಂದ್ ಹಾಗೂ ಶಕ್ತಿಕೇಂದ್ರದ ಅಧ್ಯಕ್ಷ ಸುಂದರೇಶ್ ಕೆರೆಹಳ್ಳಿ, “ಜನಪ್ರತಿನಿಧಿಗಳು ರಾಜಕೀಯ ಭಿನ್ನಭಿಪ್ರಾಯಗಳನ್ನು ಬದಿಗೊತ್ತಿ ಇಂತಹ ಮಹತ್ವದ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಅದು ಅವರ ಪ್ರಾಥಮಿಕ ಕರ್ತವ್ಯ ಕೂಡ ಹೌದು” ಎಂದು ಅಭಿಪ್ರಾಯಪಟ್ಟರು.

ಈ ಪತ್ರಿಕಾಗೋಷ್ಠಿಯಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ರಮೇಶ್ ಪಿ., ಮಂಜುಳಾ ಕೇತಾರ್ಜಿರಾವ್, ಮಾಜಿ ಸದಸ್ಯ ಮಲ್ಲಿಕಾರ್ಜುನ ಹಾಗೂ ಪ್ರಮುಖರಾದ ಸುಧೀರ್ ಪಿ., ಗಣೇಶ್, ಮಹಮ್ಮದ್ ಹುಸೇನ್ ಮುಂತಾದವರು ಉಪಸ್ಥಿತರಿದ್ದರು.

ಒಟ್ಟಾರೆಯಾಗಿ ಶಾಸಕರ ಗೈರುಹಾಜರಿ ಇದೀಗ ಸ್ಥಳೀಯ ಮಟ್ಟದಲ್ಲಿ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದ್ದು, ಇದಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದುನೋಡಬೇಕಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]