ಭದ್ರಾವತಿ

ಎಸ್‌ಐಆರ್ ಕಾರ್ಯಾಚರಣೆ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು !

ಭದ್ರಾವತಿ : ತಾಲ್ಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ಸೋಮವಾರ ಎಸ್‌ಐಆರ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಿಎಲ್‌ಓ ಮಂಜುಳಾ (50) ಕುಸಿದು ಬಿದ್ದು ಮೃತರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮಂಜುಳಾ ಭದ್ರಾವತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಸೋಮವಾರ ಮಧ್ಯಾಹ್ನ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ಬಿಎಲ್‌ಒ ಮತ್ತು ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದರು.

ಈ ವೇಳೆ ಮಂಜುಳಾ ಆಕಸ್ಮಿಕವಾಗಿ ಕುಸಿದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆಗೆ ತೆರಳುವ ಮೊದಲೇ ಮಂಜುಳಾ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ, ಮಂಜುಳಾ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಭದ್ರಾವತಿ ತಾಲ್ಲೂಕು ಆಸ್ಪತ್ರೆಯಲ್ಲಿ ತಹಶೀಲ್ದಾರ್ ಪ್ರದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!