ಹೊಸನಗರ

ರಕ್ತದಾನದಿಂದ ಇಬ್ಬರ ಜೀವ ಉಳಿಸಲು ಸಾಧ್ಯ: ಆರಗ ಜ್ಞಾನೇಂದ್ರ

ದಾನಗಳಲ್ಲಿ ರಕ್ತದಾನ ಸರ್ವಶ್ರೇಷ್ಠ ದಾನವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ರಕ್ತದಾನದಿಂದ ಇಬ್ಬರ ಜೀವ ಉಳಿಸಲು ಸಾಧ್ಯ Jnanendra

ರಿಪ್ಪನ್‌ಪೇಟೆ: ರೋಗಿಗಳ ಜೀವ ಉಳಿಸುವಲ್ಲಿ ತುರ್ತು ರಕ್ತದಾನ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ದಾನಗಳಲ್ಲಿ ರಕ್ತದಾನ ಸರ್ವಶ್ರೇಷ್ಠ ದಾನವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಹುಂಚದ ಪದ್ಮಾಂಬ ಸಭಾಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ನಡೆಯುತ್ತಿರುವ ಸೇವಾ ಸಂಕಲ್ಪ ಕಾರ್ಯಕ್ರಮದ ಅಂಗವಾಗಿ ಹೊಸನಗರ ತಾಲ್ಲೂಕು ಬಿಜೆಪಿ ಎಸ್‌ಸಿ–ಎಸ್‌ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನ ಮಾಡುವುದರಿಂದ ಅಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ಇಂತಹ ಮಾನವೀಯ ಸೇವಾ ಕಾರ್ಯಗಳಲ್ಲಿ ಭಾಗವಹಿಸುವ ಮೂಲಕ ಆತ್ಮತೃಪ್ತಿ ಹಾಗೂ ನೆಮ್ಮದಿಯನ್ನು ಪಡೆಯಬಹುದು ಎಂದು ಅವರು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕೋಣಂದೂರು ರೋಟರಿ ಕ್ಲಬ್ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಗಿರೀಶ್, ಎಸ್‌ಟಿ ಮೋರ್ಚಾ ಅಧ್ಯಕ್ಷೆ ಆಶಾ ರವೀಂದ್ರ, ಹೊಸನಗರ ತಾಲ್ಲೂಕು ಬಿಜೆಪಿ ಪ್ರಭಾರಿಗಳಾದ ಪದ್ಮಿನಿ, ಹುಂಚ ಮಹಾಶಕ್ತಿ ಕೇಂದ್ರ ಅಧ್ಯಕ್ಷ ವಿನಾಯಕ್, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಹಾಗೂ ಸಂದೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!