ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಘಟಕ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತ ಯುವಕನನ್ನು ಹುಂಚ ಸಮೀಪದ ಮಾರ್ನಮಿಬೈಲು ಗ್ರಾಮದ ನಿವಾಸಿ ಧನುಷ್ ಎನ್ (25) ಎಂದು ಗುರುತಿಸಲಾಗಿದೆ.

ಧನುಷ್ ಕಳೆದ 2026ರ ಜ.19 ರಂದು ಮನೆಯಿಂದ ಹೊರಟು ಹೋಗಿದ್ದು ಬಳಿಕ ಮನೆಗೆ ಹಿಂದಿರುಗಿರುವುದಿಲ್ಲ. ಆತಂಕಗೊಂಡ ಕುಟುಂಬದವರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಈ ನಡುವೆ ಬುಧವಾರ ಕೂರಂಬಳ್ಳಿ ಗೇಟ್ (5 ಎಂ.ಎಸ್) ಅರಣ್ಯ ಪ್ರದೇಶದ ಸಮೀಪ ತಿಗುಣೆಕೊಪ್ಪ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಯುವಕನ ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಕುಂಸಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment