ಹೊಸನಗರ: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲಿನ ಸಂಪಳ್ಳಿ ಗ್ರಾಮದ ಮಂಕೋಡು ಪ್ರದೇಶದಲ್ಲಿ ಸುಮಾರು 5೦೦ ಅಡಿ ಆಳದ ಜೆಜಿಎಂ (JJM) ಕೊರೆದ ಕೊಳವೆ ಬಾವಿಯನ್ನು ಮುಚ್ಚದೆ ಬಿಟ್ಟು ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಉಂಟುಮಾಡಿದೆ.
ಗ್ರಾಮದ ಸಾರ್ವಜನಿಕ ಸ್ಥಳದ ಸಮೀಪದಲ್ಲಿರುವ ಈ ಕೊಳವೆ ಬಾವಿ ಬಹಳ ದಿನಗಳಿಂದ ಮುಚ್ಚದೇ ಇರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈ ವಿಷಯದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ
ಗ್ರಾಮಸ್ಥರು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಕೊಳವೆ ಬಾವಿಯನ್ನು ಸುರಕ್ಷಿತವಾಗಿ ಮುಚ್ಚುವಂತೆ ಆಗ್ರಹಿಸಿದ್ದಾರೆ. ಅಪಾಯ ಸಂಭವಿಸುವ ಮುನ್ನವೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಲೇಖನವನ್ನು ಮುಂದುವರಿಸಿ ಓದಿ
ಸ್ಥಳೀಯ ಆಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

