Accident

ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ರಸ್ತೆ ಬದಿ ನಿಂತಿದ್ದ 8 ವರ್ಷದ ಬಾಲಕ ಬಲಿ !

ರಸ್ತೆ ಬದಿಯಲ್ಲಿ ನಿಂತಿದ್ದ ಎಂಟು ವರ್ಷದ ಬಾಲಕನಿಗೆ ಅತಿವೇಗವಾಗಿ ಬಂದ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾನೆ.

ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ರಸ್ತೆ ಬದಿ ನಿಂತಿದ್ದ 8 ವರ್ಷದ ಬಾಲಕ ಬಲಿ Boy

ಸಾಗರ : ರಸ್ತೆ ಬದಿಯಲ್ಲಿ ನಿಂತಿದ್ದ ಎಂಟು ವರ್ಷದ ಬಾಲಕನಿಗೆ ಅತಿವೇಗವಾಗಿ ಬಂದ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾನೆ.

WhatsApp Group Join Now
Telegram Group Join Now
Instagram Group Join Now

ಮೃತ ಬಾಲಕನನ್ನು ದಾಸಕೊಪ್ಪ ಗ್ರಾಮದ ಪ್ರಶಾಂತ್ ಎಂಬುವರ ಪುತ್ರ ತನ್ಮಯ್ (8) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 27ರಂದು ಸಂಜೆ ಗೌತಮಪುರದಿಂದ ಆನಂದಪುರ ಮಾರ್ಗವಾಗಿ ಬರುತ್ತಿದ್ದ ಈ ಲಗೇಜ್ ಆಟೋವನ್ನು ಗೇರ್ಬೀಸ್ ಸಮೀಪದ ತೋಳಿಕಲ್ಲಿನ ನಿವಾಸಿ ಸಂತೋಷ್ ಕೊಲ್ಲಪ್ಪ ಎಂಬವರು ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದರು ಎನ್ನಲಾಗಿದೆ.

ಆನಂದಪುರ-ಶಿಕಾರಿಪುರ ರಸ್ತೆಯಲ್ಲಿರುವ ದಾಸಕೊಪ್ಪದ ಅಂಗಡಿಯೊಂದರ ಬಳಿ ನಿಂತಿದ್ದ ತನ್ಮಯ್‌ಗೆ ಆಟೋದ ಗ್ರಿಲ್ ಬಡಿದು, ಹಣೆಯ ಭಾಗ ಮತ್ತು ಬಲಗೈಗೆ ತೀವ್ರ ಪೆಟ್ಟಾಗಿತ್ತು. ಪರಿಣಾಮವಾಗಿ ವಿಪರೀತ ರಕ್ತಸ್ರಾವ ಉಂಟಾಗಿತ್ತು.

ಗಾಯಾಳು ಬಾಲಕನನ್ನು ತಕ್ಷಣವೇ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ಹಾಗೂ ಅಲ್ಲಿಂದ ಮೆಟ್ರೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾನೆ.

ಈ ಅಪಘಾತಕ್ಕೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!