ಹೊಸನಗರ ; ರಾಜ್ಯದಲ್ಲಿ ಸೆ. 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ.

ಹೌದು, ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಆರಂಭವಾಗಿದೆ. ಕರ್ತವ್ಯಕ್ಕೆ ಗೈರು ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಅವರನ್ನು ಅಮಾನತು ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

ಸಮೀಕ್ಷೆ ನಡೆಯುತ್ತಿದ್ದರು ಕೂಡ ಎಂ ರಂಗನಾಥ ಕೆಲಸಕ್ಕೆ ರಜೆ ಹಾಕಿದ್ದಾರೆ. ಸಮೀಕ್ಷೆ ಮಾಡುವ ಒಂದಿಷ್ಟು ಜವಾಬ್ದಾರಿ ಹೊಂದಿದ್ದಾರೆ. ರಂಗನಾಥ್ ಬಿ.ಆರ್.ಎಸ್ ಕೇಂದ್ರದ ಸಮನ್ವಯ ಅಧಿಕಾರಿಯಾಗಿದ್ದಾರೆ. ರಜೆ ಹಾಕಿ ಅಧಿಕಾರಿಗಳ ದೂರವಾಣಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಂಗನಾಥ್ ಅಮಾನತುಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಆದರೆ, ಈ ಒಂದು ಸಮೀಕ್ಷೆ ವೇಳೆ ಸರ್ವರ್ ಸಮಸ್ಯೆ ಮೊಬೈಲ್ ನಲ್ಲಿ ತಾಂತ್ರಿಕ ದೋಷಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಜಾತಿಗಣತಿಯನ್ನು ತಕ್ಷಣವೇ ಮುಂದೂಡುವಂತೆ ರಾಜ್ಯಾದ್ಯಂತ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.