HOSANAGARA | ಪಟ್ಟಣದ ಚೌಡಮ್ಮ ರಸ್ತೆಯ ಕಳೂರು ಸೇವಾ ಸಹಕಾರ ಬ್ಯಾಂಕ್‌ನ ನೂತನ ಕಟ್ಟಡ ನಿರ್ಮಾಣಕ್ಕೆ ಕಾಂಕ್ರೀಟ್ ನಡೆಯುತ್ತಿದ್ದು ಇಂದು ಸಂಜೆ ಕಟ್ಟಡದ ಒಂದು ಭಾಗದ ಸೆಂಟ್ರಿಂಗ್ ಕುಸಿದು ಬಿದ್ದ ಕಾರಣ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು ಸಂಭವಿಸಬಹುದಾದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಸ್ಲ್ಯಾಬ್ ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ದುರಂತ ಸಂಭವಿಸುತ್ತಿದ್ದಂತೆ ಸುದ್ದಿ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು.
Read More:ರಸ್ತೆ ಪಕ್ಕದಲ್ಲೇ ಪ್ರಸವ, ನವಜಾತ ಶಿಶುವನ್ನು ಅಲ್ಲೇ ಬಿಟ್ಟು ಹೋದ ಮಹಾತಾಯಿ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.