BREAKING NEWS |  ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 13 ಮಂದಿ ಸಾವು !

Written by Mahesh Hindlemane

Published on:

SHIVAMOGGA | ಭೀಕರ ರಸ್ತೆ ಅಪಘಾತದಲ್ಲಿ 13 ಜನ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.

ಮೃತರೆಲ್ಲರು ಶಿವಮೊಗ್ಗದ ಭದ್ರಾವತಿಯ ಎಮ್ಮೆಹಟ್ಟಿಯ ಪರಶುರರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾಬಾಯಿ (65), (ಪುಣ್ಯ 50), ಮಂಜುಳುಬಾಯಿ (62), ಆದರ್ಶ (23), ಮಾನಸ (24), ರೂಪಾ (40), ಮಂಜುಳಾ (50) ಮೃತಪಟ್ಟವರು ಎಂದು ತಿಳಿದು ಬಂದಿದೆ ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ.

ಓರ್ವ ಬಾಲಕಿ ಮತ್ತು ಅಜ್ಜಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನಜಾವ 4 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಊರಿಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Leave a Comment