ಅಪರಾಧ ಸುದ್ದಿ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ !

SHIVAMOGGA ; ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗಿರೀಶ್‌ ನಾಯ್ಕ (30) ಕೊಲೆಯಾದ ದುರ್ದೈವಿ. ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾರೆ. ವೈಯಕ್ತಿಕ ದ್ವೇಷದಿಂದ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದು ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]