Hosanagara

ಸ್ವ-ಉದ್ಯೋಗದಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ

ಹೊಸನಗರ : ರಾಜ್ಯ ಸರ್ಕಾರವು ಸ್ವ-ಉದ್ಯೋಗ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಯುವಕ–ಯುವತಿಯರು ಅವುಗಳ ಪ್ರಯೋಜನ ಪಡೆದು ಸ್ವ-ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಬೇಳೂರು ಗೋಪಾಲಕೃಷ್ಣ ಅವರು ಸಲಹೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಕೈಗಾರಿಕೆ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರ ಆಶ್ರಯದಲ್ಲಿ ಆಯೋಜಿಸಿದ್ದ ಉದ್ಯಮಶೀಲತಾ ಜಾಗೃತಿ ಶಿಬಿರದಲ್ಲಿ ಫಲಾನುಭವಿಗಳಿಗೆ ಸುಧಾರಿತ ಉಪಕರಣಗಳನ್ನು ವಿತರಿಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಯುವಜನರಲ್ಲಿ ಸ್ವ-ಉದ್ಯೋಗದ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಸ್ವ-ಉದ್ಯೋಗವು ಒಂದೊಂದು ಕುಟುಂಬದ ಬದುಕನ್ನು ಆರ್ಥಿಕವಾಗಿ ಸದೃಢಗೊಳಿಸುವುದರ ಜೊತೆಗೆ ಸಮಾಜದ ಸ್ವಾವಲಂಬನಕ್ಕೂ ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಈ ಸಂದರ್ಭ ಮೀನುಗಾರಿಕಾ ಇಲಾಖೆಯ ವತಿಯಿಂದ 2025–26ನೇ ಸಾಲಿನ ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಮೀನುಗಾರಿಕಾ ಸಲಕರಣೆಗಳು, ಫೈಬರ್ ಉಕುಡ, ಹರಿಗೋಲು ಹಾಗೂ ಪೂರಕ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ಹೂವಿನಕೋಣೆ, ತಾಲೂಕು ದಂಡಾಧಿಕಾರಿ ಭರತ್ ರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ನರೇಂದ್ರ ಕುಮಾರ್, ಬಗರ್ ಹುಕುಂ ಸಮಿತಿಯ ಸದಸ್ಯ ಸ್ವಾಮಿ, ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಡ ರೈತನ ಒಕ್ಕಲೆಬ್ಬಿಸುವ ನೋಟಿಸ್ : ಎಸಿಎಫ್ ಕೋರ್ಟ್ ಆದೇಶ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650