ರಿಪ್ಪನ್‌ಪೇಟೆ ; ಬೆಂಗಳೂರಿಗೆ ಹೊರಟ್ಟಿದ್ದ ಸ್ಲೀಪರ್ ಕೋಚ್ ಬಸ್‌ವೊಂದು ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಘಟನೆ ತಡರಾತ್ರಿ 10:45 ರ ಸುಮಾರಿಗೆ ಅರಸಾಳು ಮತ್ತು ಸೂಡೂರು ನಡುವೆ ನಡೆದಿದೆ.
ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್ (SAT) ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ.

ಸಂಪೂರ್ಣ ಸುಟ್ಟು ಕರಕಲಾದ ಬಸ್ !
ರಾತ್ರಿ ನಿಟ್ಟೂರಿನಿಂದ ಹೊರಟು ನಗರ, ಹೊಸನಗರ, ರಿಪ್ಪನ್‌ಪೇಟೆ ಮೂಲಕ ಶಿವಮೊಗ್ಗದತ್ತ ಬರುವಾಗ ಅರಸಾಳು-ಸೂಡೂರು ಬಳಿ ಮಾರ್ಗದಲ್ಲಿ ಕಾಡಿನ ಮಧ್ಯೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಚಾಲಕ ಸೇರಿ 40 ಪ್ರಯಾಣಿಕರಿದ್ದು ಎರಡ್ಮೂರು ಜನರಿಗೆ ಗಾಯಗಳಾದ ಬಗ್ಗೆ ವರದಿಯಾಗಿದೆ. ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1JCLn4JeWw/
ಘಟನೆಯಲ್ಲಿ ಪ್ರಯಾಣಿಕರ ಲಗೇಜ್ ಸಹಿತ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ, ಅಂಬುಲೆನ್ಸ್, ಪೊಲೀಸರು ದೌಡಾಯಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





