ಸಾಗರ

ಬೆಂಗಳೂರಿನಿಂದ ಸಾಗರಕ್ಕೆ ಹೊರಟಿದ್ದ ಬಸ್‌ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 69ರ ಆನಂದಪುರದ ಮುಂಬಾಳು ಸಮೀಪ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ಬೆಂಗಳೂರಿನಿಂದ ಸಾಗರಕ್ಕೆ ಹೊರಟಿದ್ದ ಬಸ್‌ಗೆ ಬೆಂಕಿ Bus

ಸಾಗರ : ಗುರುವಾರ ಮುಂಜಾನೆ 5:45ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 69ರ ಆನಂದಪುರದ ಮುಂಬಾಳು ಸಮೀಪ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

WhatsApp Group Join Now
Telegram Group Join Now
Instagram Group Join Now

ಬೆಂಗಳೂರಿನಿಂದ ಸಾಗರದ ಕಡೆಗೆ ಹೊರಟಿದ್ದ ಖಾಸಗಿ ಬಸ್ಸಿಗೆ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಶೇ.80 ರಷ್ಟು ಸುಟ್ಟು ಕರಕಲಾಗಿದೆ.

ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರಿಂದ ಘಟನೆ ನಡೆಯುವಾಗ ಬಸ್ಸಿನಲ್ಲಿ ಇಬ್ಬರು ಪ್ರಯಾಣಿಕರು, ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ನಾಲ್ಕು ಜನರಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ನಿರ್ವಾಹಕರು ಎಚ್ಚೆತ್ತುಕೊಂಡು ತ್ವರಿತವಾಗಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇವರ ಈ ತ್ವರಿತ ನಿರ್ಧಾರ ಹಾಗೂ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ.

ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಹಾಗೂ ಅವರ ತಂಡ ಭೇಟಿ ನೀಡಿ, ಹೆದ್ದಾರಿಯಲ್ಲಿ ಯಾವುದೇ ಟ್ರಾಫಿಕ್ ಜಾಮ್ ಆಗದಂತೆ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಬಳಿಕ ಸ್ಥಳಕ್ಕಾಗಮಿಸಿದ ಸಾಗರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ಕುರಿತಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!