ರಿಪ್ಪನ್‌ಪೇಟೆ: ಇಲ್ಲಿನ ಸೂಡೂರು ಗ್ರಾಮದ ಹತ್ತಿರ ಖಾಸಗಿ ಬಸ್ (ಗಜಾನನ) ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ ಕಡೆಯಿಂದ ರಿಪ್ಪನ್‌ಪೇಟೆಗೆ ಬರುತ್ತಿದ್ದ ಬಸ್ ಹಾಗೂ ರಿಪ್ಪನ್‌ಪೇಟೆ ಮಾರ್ಗವಾಗಿ ಶಿವಮೊಗ್ಗಕ್ಕೆ ಹೊರಟಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಗಾಯಗೊಂಡವರು ಸಾಗರದ ಆವಿನಹಳ್ಳಿ ಮೂಲದವರೆಂದು ತಿಳಿದುಬಂದಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

