Accident

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !

ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್‌ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನಜಾವ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಘಟನೆಯಲ್ಲಿ ಖಾಸಗಿ ಬಸ್‌ನ ನಿರ್ವಾಹಕ ಹೊಸನಗರದ ಕರಿನಗೊಳ್ಳಿ ನಿವಾಸಿ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಮೃತರಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉಡುಪಿಯ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಸೇರಿ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಮೇಶ್ (50), ಪ್ರಸಾದ್ (40), ವಿಷ್ಣು (21), ಮಂಜುನಾಥ್ (45), ಸುಜಾತಾ (40), ಅನಂದ್ ನಾಯ್ಕ್ (50), ನೀಲಾಂಬಿಕಾ (45), ಪ್ರಸಾದ್ (43), ಬಿಂದು (20), ಶಶಾಂಕ್ (20), ಲಕ್ಷ್ಮೀ (35), ಶ್ರೀರಾಮುಲು (42) ಹಾಗೂ ಕಾರ್ತಿಕ್ (32) ಎಂಬುವರು ಗಾಯಗೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಖಾಸಗಿ ಬಸ್‌ ಮಂಗಳೂರಿನಿಂದ ಚಳ್ಳಕೆರೆಗೆ ತೆರಳುತಿತ್ತು ಎಂದು ತಿಳಿದು ಬಂದಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನ ಎಡ ಬದಿ ಸಂಪೂರ್ಣ ಹಾನಿಯಾಗಿದೆ. ಸೀಟುಗಳು ಕಿತ್ತು ಬಂದಿವೆ. 

ತುಂಗಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯಿಂದಾಗ ಈ ಭಾಗದಲ್ಲಿ ರಸ್ತೆ ಸಂಚಾಕ್ಕೆ ಅಡಚಣೆಯಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>