ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !

ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್‌ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನಜಾವ ನಡೆದಿದೆ. ಘಟನೆಯಲ್ಲಿ ಖಾಸಗಿ ಬಸ್‌ನ ನಿರ್ವಾಹಕ ಹೊಸನಗರದ ಕರಿನಗೊಳ್ಳಿ ನಿವಾಸಿ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಮೃತರಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉಡುಪಿಯ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಸೇರಿ … Continue reading ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !