ಹೊಸನಗರ ; ಖಾಸಗಿ ಬಸ್ವೊಂದು ಹುಲಿಕಲ್ ಘಾಟಿಯ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ತಡರಾತ್ರಿ ನಡೆದಿದೆ.

ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ಇದಾಗಿದ್ದು ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನಾ ಸ್ಥಳಕ್ಕೆ ನಗರ ಪೊಲೀಸರು ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





