ಶಿವಮೊಗ್ಗ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಬಿ.ವೈ. ರಾಘವೇಂದ್ರ ಖಡಕ್ ಸೂಚನೆ

ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ವಿಳಂಬವಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಭೂಸ್ವಾಧೀನ, ಪರಿಹಾರ ಪಾವತಿ, ಅರಣ್ಯ ಅನುಮತಿ ಮತ್ತು ಜಂಟಿ ಸರ್ವೆ ಸಮಸ್ಯೆಗಳಿಗೆ ಸಮನ್ವಯದಿಂದ ಪರಿಹಾರ ಕಂಡುಕೊಳ್ಳಲು ಹೇಳಿದರು.

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಬಿ.ವೈ. ರಾಘವೇಂದ್ರ ಖಡಕ್ ಸೂಚನೆ – by raghavendra mp

ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಆರಂಭವಾಗಿ ಇನ್ನೂ ಪೂರ್ಣಗೊಳ್ಳದಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಇನ್ನಷ್ಟು ವಿಳಂಬ ಮಾಡದೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದರು.

ತುಮಕೂರು–ಶಿವಮೊಗ್ಗ, ಚಿತ್ರದುರ್ಗ–ಶಿವಮೊಗ್ಗ, ಶಿಕಾರಿಪುರ–ರಾಣೇಬೆನ್ನೂರು, ಸಾಗರ ಟೌನ್‌ ಸೇರಿದಂತೆ ಹಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ವಿವಿಧ ಕಾರಣಗಳಿಂದ ವಿಳಂಬವಾಗಿರುವುದು ಸಭೆಯಲ್ಲಿ ಚರ್ಚೆಗೆ ಬಂದಿತು.

ಅರಣ್ಯ ಇಲಾಖೆ, ಕಂದಾಯ ಇಲಾಖೆ, ಭೂ ದಾಖಲೆಗಳ ಸರ್ವೆ ಇಲಾಖೆ, ತೋಟಗಾರಿಕೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಕಾಮಗಾರಿಗಳಿಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಪರಿಹಾರಧನ ವಿತರಣೆಯಲ್ಲಿ ವಿಳಂಬವಾಗುತ್ತಿರುವುದು ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ರಾಘವೇಂದ್ರ ಸೂಚಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಭೂಸ್ವಾಧೀನ, ಪರಿಹಾರ ಪಾವತಿ, ಜಂಟಿ ಸರ್ವೆ ವರದಿ, ಅರಣ್ಯ ಭೂಮಿ ವರ್ಗಾವಣೆ, ಮರಗಳ ತೆರವು, ಸ್ಥಳಾಂತರಿಸಬೇಕಾದ ಕಟ್ಟಡಗಳು ಹಾಗೂ ಇತರೆ ಇಲಾಖೆಗಳ ಅನುಮತಿಗಳ ಕಾರಣದಿಂದ ಕಾಮಗಾರಿಗಳು ಸ್ಥಗಿತಗೊಳ್ಳುತ್ತಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ-206ರ ತುಮಕೂರು–ಶಿವಮೊಗ್ಗ ನಾಲ್ಕು ಪಥದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಎಂ.ಸಿ. ಹಳ್ಳಿ, ಕಾರೇಹಳ್ಳಿ ಟವರ್ ಪ್ರದೇಶ ಹಾಗೂ ಮಲವಗೊಪ್ಪ ಭಾಗದಲ್ಲಿ ಭೂಸ್ವಾಧೀನ ಸಮಸ್ಯೆಗಳು ಕಾಮಗಾರಿಗೆ ಅಡ್ಡಿಯಾಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದರು.

ಈ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಬೇಕು. ಸಲ್ಲದ ಕಾರಣಗಳನ್ನು ಹೇಳದೆ, ಜನರಿಗೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸೂಚಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650