News

ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಗಣ್ಯರು ಭಾಗಿ !

ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗ ಮತ್ತು ಬಿ ವೈ ರಾಘವೇಂದ್ರ ಪುತ್ರ ಸುಭಾಷ್ ಭಾನುವಾರ ವಿವಾಹ ಜೀವನಕ್ಕೆ ಕಾಲಿಡಲಿದ್ದಾರೆ. ಈ ಸಂದರ್ಭದಲ್ಲಿ ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Instagram Group Join Now

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿವೈ ರಾಘವೇಂದ್ರ ಪುತ್ರ ಸುಭಾಷ್ ಮತ್ತು ಶ್ರಾವಣಾ ಅವರ ಆರತಕ್ಷತಾ ಸಮಾರಂಭವು ಅದ್ದೂರಿಯಾಗಿ ನಡೆಯಿತು . ಈ ಸಂದರ್ಭದಲ್ಲಿದ್ದ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿವೈ ರಾಘವೇಂದ್ರ ಶಾಲು ಹೊದಿಸಿದರು.

ಮಾರ್ಚ್ 24 ರಂದು ಕಲಬುರಗಿಯಲ್ಲಿ ಬಿವೈ ರಾಘವೇಂದ್ರ ಅವರ ಪುತ್ರ ಸುಭಾಷ್, ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ ಮತ್ತು ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ವರಿಸಲಿದ್ದಾರೆ.

ಸುಭಾಷ್ ಮತ್ತು ಶ್ರಾವಣಾ ಅವರ ಆರತಕ್ಷತೆ ಸಮಾರಂಭದಲ್ಲಿ ಜಾತಿಯ ಬಿಜೆಪಿಯ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ. ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಭಾಗವಹಿಸಿ, ನವ ವಧು-ವರರಿಗೆ ಶುಭ ಹಾರೈಸಿದರು.

ಚಿತ್ರನಟರಾದ ರಾಕಿಂಗ್ ಸ್ಟಾರ್ ಯಶ್, ಡಾಲಿ ಧನಂಜಯ್, ಹಿರಿಯ ನಟ ಅನಂತ್ ನಾಗ್, ಸುಂದರ್ ರಾಜ್, ಪ್ರಮೀಳಾ ಜೋಷಾಯ್, ರಮೇಶ್ ಅರವಿಂದ್ ಮತ್ತು ಇತರರು ಆಗಮಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಮತ್ತು ಶ್ರಾವಣಾ ಅವರ ಆರತಕ್ಷತೆ ಸಮಾರಂಭವು ನಡೆಯಿತು.

Read More

ಹೊಸನಗರ ; 39 ಕೆ.ಜಿ. ಶ್ರೀಗಂಧ ಸಹಿತ ಓರ್ವನ ಬಂಧನ !

500 ರೂ ನೋಟ್ ಬ್ಯಾನ್ ಆಗುತ್ತಾ ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!