ನವರಾತ್ರಿ ನಮಸ್ಯಾ: ಕುಟುಂಬ ಸಮೇತರಾಗಿ ವಿಜಯೇಂದ್ರ ಯಡಿಯೂರಪ್ಪ ಭಾಗಿ

Written by Koushik G K

Published on:

ಸಾಗರ: ಶ್ರೀರಾಮಚಂದ್ರಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ “ವಿಶ್ವಾವಸು ನವರಾತ್ರಿ ನಮಸ್ಯಾ” ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಭಾಗವಹಿಸಿ, ತಾಯಿ ದುರ್ಗಾಮಾತೆಯ ಆಶೀರ್ವಾದ ಪಡೆದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಶ್ರೀಮಠವು ಗೋ ಸಂರಕ್ಷಣೆ, ಸನಾತನ ಧರ್ಮದ ಆಧ್ಯಾತ್ಮಿಕ ಪರಂಪರೆ ಬೆಳೆಸುವಲ್ಲಿ ಅಹರ್ನಿಶಿ ಶ್ರಮಿಸುತ್ತಿರುವುದು ನಮ್ಮ ನಾಡಿನ ಸೌಭಾಗ್ಯ” ಎಂದು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮಾಜಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಶ್ರೀಮಠದ ಆಶ್ರಯದಲ್ಲಿ ನಡೆಯುತ್ತಿರುವ ನವರಾತ್ರಿ ಕಾರ್ಯಕ್ರಮವು ಭಕ್ತರ ಅಪಾರ ಸಮಾಗಮದೊಂದಿಗೆ ವೈಭವದಿಂದ ಸಾಗುತ್ತಿದೆ.

ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

Leave a Comment