ಹೊಸನಗರ

ಚಿರತೆ ದಾಳಿಗೆ ಕರು ಬಲಿ: ಹಿಂಡ್ಲೆಮನೆ ಗ್ರಾಮಸ್ಥರಲ್ಲಿ ಆತಂಕ

ಹಿಂಡ್ಲೆಮನೆಯಲ್ಲಿ ಚಿರತೆ ದಾಳಿಗೆ ಎರಡು ವರ್ಷದ ಕರು ಮೃತಪಟ್ಟಿರುವ ಘಟನೆ ನಡೆದಿದೆ.

ಹೊಸನಗರ: ತಾಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯಲ್ಲಿ ಚಿರತೆ ದಾಳಿಗೆ ಎರಡು ವರ್ಷದ ಕರು ಮೃತಪಟ್ಟಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಹಿಂಡ್ಲೆಮನೆಯ ಶ್ರೀಮತಿ ಎಂಬುವರಿಗೆ ಸೇರಿದ ಕರುವನ್ನು ಶನಿವಾರ ಎಂದಿನಂತೆ ಮೇಯಲು ಬಿಟ್ಟಿದ್ದ ವೇಳೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಕರುವಿನ ಮೇಲೆ ದಾಳಿ ನಡೆಸಿದ ಚಿರತೆ ಅದರ ಗಂಟಲಿನ ಭಾಗಕ್ಕೆ ಗಂಭೀರ ಗಾಯಗೊಳಿಸಿದೆ.

ಚಿರತೆಯ ದಾಳಿಯಿಂದ ತಪ್ಪಿಸಿಕೊಂಡ ಕರು ಹೇಗೋ ಮನೆ ಕಡೆಗೆ ಮರಳಿದೆ. ಆದರೆ ಗಂಟಲಿನ ಭಾಗಕ್ಕೆ ತೀವ್ರ ಗಾಯವಾಗಿದ್ದರಿಂದ ಕೆಲವೇ ಸಮಯದಲ್ಲಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಹಿಂಡ್ಲೆಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಇದೀಗ ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಜನರು ಹಾಗೂ ಜಾನುವಾರುಗಳ ಸುರಕ್ಷತೆ ದೃಷ್ಟಿಯಿಂದ ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಚಲನವಲನದ ಬಗ್ಗೆ ಪರಿಶೀಲನೆ ನಡೆಸಬೇಕು. ಅಗತ್ಯ ಕ್ರಮ ಕೈಗೊಂಡು ಚಿರತೆಯನ್ನು ಸೆರೆಹಿಡಿಯುವ ಮೂಲಕ ಗ್ರಾಮಸ್ಥರ ಭಯವನ್ನು ದೂರ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮನೆಯ ಸುತ್ತಮುತ್ತ ಹಾಗೂ ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರು ಪರಸ್ಪರ ಸೂಚಿಸುತ್ತಿದ್ದಾರೆ. ಈ ಭಾಗದಲ್ಲಿ ಚಿರತೆಯ ಸಂಚಾರ ಮುಂದುವರಿದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಶೀಘ್ರ ಕ್ರಮ ಕೈಗೊಳ್ಳುವ ನಿರೀಕ್ಷೆ ಗ್ರಾಮಸ್ಥರದ್ದಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!