ಹೊಸನಗರ

ರಿಪ್ಪನ್‌ಪೇಟೆ: ವಿಬಿ-ಜಿ-ರಾಮ್-ಜಿ ಯೋಜನೆ ಸದುಪಯೋಗಕ್ಕೆ ಕರೆ

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು.

ವಿಬಿ-ಜಿ-ರಾಮ್-ಜಿ ಯೋಜನೆ ಸದುಪಯೋಗಕ್ಕೆ ಕರೆ VB Ram G

ರಿಪ್ಪನ್‌‌ಪೇಟೆ: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು.

WhatsApp Group Join Now
Telegram Group Join Now
Instagram Group Join Now

ಸಭೆಯ ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಆಡಳಿತಾಧಿಕಾರಿ ರಾಜೇಂದ್ರ ಕುಮಾರ್ ಅವರು ಮಾತನಾಡಿ, ವಿಬಿ-ಜಿ-ರಾಮ್-ಜಿ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ರೈತರು ತಮ್ಮ ಜಮೀನುಗಳಲ್ಲಿ ತೋಟಗಾರಿಕೆ ಕೈಗೊಳ್ಳಲು, ಸಂಪರ್ಕ ರಸ್ತೆ ಹಾಗೂ ಕಾಲುವೆಗಳ ನಿರ್ಮಾಣ, ದನದ ಕೊಟ್ಟಿಗೆ ಸೇರಿದಂತೆ ಹತ್ತು ಹಲವು ಗ್ರಾಮೀಣಾಭಿವೃದ್ಧಿ ಕಾರ್ಯಗಳಿಗೆ ನೆರವು ನೀಡಲು ಗ್ರಾಮ ಪಂಚಾಯಿತಿಗೆ ಹೆಚ್ಚಿನ ಅಧಿಕಾರವಿದೆ. ಜನರು ಈ ಯೋಜನೆಗಳ ಲಾಭ ಪಡೆಯಲು ಮುಂದಾಗಬೇಕು ಎಂದು ಅವರು ವಿವರಿಸಿದರು.

ಕಡಿಮೆ ಹಾಜರಾತಿಗೆ ಬೇಸರ:

ವಿಶೇಷ ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ವಿರಳವಾಗಿದ್ದರ ಬಗ್ಗೆ ಆಡಳಿತಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. ಇಂದಿನ ಯುವಜನತೆ ಗಾಂಧೀಜಿಯವರ ಹೋರಾಟ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿಕೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಮುಂಬರುವ ದಿನಗಳಲ್ಲಿ ನಡೆಯಲಿರುವ ವಾರ್ಡ್ ಮತ್ತು ಗ್ರಾಮ ಸಭೆಗಳಲ್ಲಿ ಸ್ಥಳೀಯ ಸಮಸ್ಯೆಗಳು ಹಾಗೂ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಚರ್ಚಿಸಿ, ಅಗತ್ಯ ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು ಎಂದು ಭರವಸೆ ನೀಡಿದರು.

ಖಾಯಂ ಪಿಡಿಒ ನೇಮಕಕ್ಕೆ ಆಗ್ರಹ:

ಗ್ರಾಮ ಪಂಚಾಯಿತಿಯಲ್ಲಿ ಸದ್ಯ ಖಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಅಗತ್ಯ ಸಿಬ್ಬಂದಿಗಳ ಕೊರತೆ ಇದೆ. ಇದರಿಂದಾಗಿ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿವೆ. ಈ ಹಿನ್ನೆಲೆಯಲ್ಲಿ, ತಕ್ಷಣವೇ ಖಾಯಂ ಪಿಡಿಒ ಅವರನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ಣಯವೊಂದನ್ನು ಅಂಗೀಕರಿಸಿ ಕಳುಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಪೌರಕಾರ್ಮಿಕರಿಗೆ ಸನ್ಮಾನ:

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಪೌರಕಾರ್ಮಿಕರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆರ್. ರಾಘವೇಂದ್ರ, ಮಾಜಿ ಸದಸ್ಯರಾದ ಸುಂದರೇಶ್, ಆರ್.ಟಿ. ಗೋಪಾಲ, ಪಿ. ರಮೇಶ, ಈಶ್ವರಪ್ಪಗೌಡ ಕುಕ್ಕಳಲೇ, ಪ್ರಕಾಶ ಪಾಲೇಕರ್, ನರಸಿಂಹ ಹಾಗೂ ಪಂಚಾಯಿತಿ ಸಿಬ್ಬಂದಿಗಳಾದ ನಾಗೇಶ್ ಮೊರೆ, ಲಕ್ಷ್ಮಿ ನಾಗರಾಜ್, ರಾಜೇಶ್, ಭೂದೇವಿ (ಚಿತ್ರಾ) ಸೇರಿದಂತೆ ಹಲವರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!