SHIKARIPURA ; ಜೋತುಬಿದ್ದ ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ.
ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮಹಮ್ಮದ್ ಈಶಾಮ್ (32) ಮೃತ ದುರ್ದೈವಿ. ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುತ್ತಿದ್ದ ವೇಳೆ ಸಾಸರಹಳ್ಳಿ ಬಳಿ ಜೋತುಬಿದ್ದ ವಿದ್ಯುತ್ ತಂತಿ ಕ್ಯಾಂಟರ್ ಗೆ ತಗುಲಿ ಚಾಲಕ ಮಹಮ್ಮದ್ ಈಶಾಮ್ ಮೃತಪಟ್ಟಿದ್ದಾರೆ.
ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಮೃತನ ತಂದೆ ರಿಯಾಜ್ ಅಹ್ಮದ್, ಸೊರಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.