ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಬೈಕ್ ಸವಾರ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಪ್ರದೀಪ್ ಎಂಬುವರ ತಲೆ ಹಾಗೂ ಕಾಲಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದ್ದು ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸಂದೀಪ್ ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿದ್ದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕ್ರಮ ಕೈಗೊಂಡಿದ್ದಾರೆ.

